ಏಕೆ ಹೀಗೆ?
ಅದರದು ಮನ ಕುಹಕಿಗಳ ಕುಟುಕಿಗೆ
ಬೆದರದು ತನು ಪಾತಕಿಗಳ ಧಮಕಿಗೆ|
ಮುದುಡುವುದು ಮನವು ಕದಡುವುದು
ಪ್ರಿಯರ ಹೀನೈಕೆಗೆ ಹೀಗೇಕೋ ಮೂಢ||
ಕೋಪ
ಅಡಿಗಡಿಗೆ ಕಾಡಿ ಶಿರನರವ ತೀಡಿ
ಮಿಡಿದಿಹುದು ಉಡಿಯೊಳಗಿನ ಕಿಡಿಯು|
ಗಡಿಬಿಡಿಯಡಲಡಿಯಿಡದೆ ತಡೆತಡೆದು
ಸಿಡಿನುಡಿಯ ನೀಡು ಸಿಹಿಯ ಮೂಢ||
ಯಶದ ಹಾದಿ
ಒಲವೀವುದು ಗೆಲುವು ಬಲವೀವುದು
ಜೊತೆಜೊತೆಗೆ ಮದವು ಮತ್ತೇರಿಸುವುದು|
ಸೋಲಿನವಮಾನ ಛಲ ಬೆಳೆಸುವುದು
ಯಶದ ಹಾದಿ ತೋರುವುದೋ ಮೂಢ|
ಬಿರುಕು
ಆತುರದ ಮಾತು ಮಾನ ಕಳೆಯುವುದು
ಕೋಪದ ನಡೆನುಡಿ ಸಂಬಂಧ ಕೆಡಿಸುವುದು|
ತಪ್ಪರಿತು ಒಪ್ಪಿದೊಡೆ ಬಿರುಕು ಮುಚ್ಚುವುದು
ಬಿರುಕು ಕಂದರವಾದೀತು ಜೋಕೆ ಮೂಢ||
-ಕ.ವೆಂ.ನಾಗರಾಜ್.
ಅದರದು ಮನ ಕುಹಕಿಗಳ ಕುಟುಕಿಗೆ
ಬೆದರದು ತನು ಪಾತಕಿಗಳ ಧಮಕಿಗೆ|
ಮುದುಡುವುದು ಮನವು ಕದಡುವುದು
ಪ್ರಿಯರ ಹೀನೈಕೆಗೆ ಹೀಗೇಕೋ ಮೂಢ||
ಕೋಪ
ಅಡಿಗಡಿಗೆ ಕಾಡಿ ಶಿರನರವ ತೀಡಿ
ಮಿಡಿದಿಹುದು ಉಡಿಯೊಳಗಿನ ಕಿಡಿಯು|
ಗಡಿಬಿಡಿಯಡಲಡಿಯಿಡದೆ ತಡೆತಡೆದು
ಸಿಡಿನುಡಿಯ ನೀಡು ಸಿಹಿಯ ಮೂಢ||
ಯಶದ ಹಾದಿ
ಒಲವೀವುದು ಗೆಲುವು ಬಲವೀವುದು
ಜೊತೆಜೊತೆಗೆ ಮದವು ಮತ್ತೇರಿಸುವುದು|
ಸೋಲಿನವಮಾನ ಛಲ ಬೆಳೆಸುವುದು
ಯಶದ ಹಾದಿ ತೋರುವುದೋ ಮೂಢ|
ಬಿರುಕು
ಆತುರದ ಮಾತು ಮಾನ ಕಳೆಯುವುದು
ಕೋಪದ ನಡೆನುಡಿ ಸಂಬಂಧ ಕೆಡಿಸುವುದು|
ತಪ್ಪರಿತು ಒಪ್ಪಿದೊಡೆ ಬಿರುಕು ಮುಚ್ಚುವುದು
ಬಿರುಕು ಕಂದರವಾದೀತು ಜೋಕೆ ಮೂಢ||
-ಕ.ವೆಂ.ನಾಗರಾಜ್.
ಏಕೆ ಹೀಗೆ? : ಅಮಿತವಾದ ಪ್ರೀತಿಯ ವೈಫಲ್ಯಕ್ಕೆ ಮನವು ಹಾಗೆಯೇ
ಪ್ರತ್ಯುತ್ತರಅಳಿಸಿಕೋಪ : ಕೋಪಕ್ಕಿಂತ ಕೇಡಿನ ಸಂಗತಿ ಇನ್ನೊಂದಿಲ್ಲ.
ಯಶದ ಹಾದಿ : ಯಶದ ಶ್ರುಂಗದಲ್ಲಿ ಮದವು ಮತ್ತೇರದಿದ್ದರೆ ಸಾಕು...
ಬಿರುಕು : ಯಾವುದೇ ಸಂಬಂಧಕ್ಕೆ ಕಿವಿ ಮಾತು.