ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಗುರುವಾರ, ಆಗಸ್ಟ್ 30, 2012

ವೇದ ಪಾಠ: ಒಂದು ನೋಟಬೇಲೂರಿನ ವೇದಾಧ್ಯಾಯೀ ಶ್ರೀ ವಿಶ್ವನಾಥಶರ್ಮರು ಹಾಸನದಲ್ಲಿ ದಿನಾಂಕ 19.8.2012 ಭಾನುವಾರ ಸಾಪ್ತಾಹಿಕ ವೇದಪಾಠವನ್ನು ಆರಂಭ ಮಾಡಿದ್ದಾರೆ. ಪತ್ರಿಕೆಗಳಲ್ಲಿ ಈ ಬಗ್ಗೆ ಸುದ್ಧಿಮಾಡಿದಾಗ ಹಲವರು ದೂರವಾಣಿ ಕರೆಮಾಡಿ ನಮಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಅವುಗಳಲ್ಲಿ ಕೆಲವು ಇಲ್ಲಿವೆ


1.ಎಲ್ಲಾ ಜಾತಿಯವರೂ ಬರಬಹುದೇ?

2.ಹೆಂಗಸರೂ ಬರಬಹುದೇ?

3.ಯಾವ ಯಾವ ಮಂತ್ರಗಳನ್ನು ಹೇಳಿಕೊಡುತ್ತಾರೆ?

4.ಪೂಜಾ ಮಂತ್ರವನ್ನೂ ಹೇಳಿಕೊಡುತ್ತಾರಲ್ಲವೇ?

5.ಶುಲ್ಕ?

6.ಇನ್ನೂ ಹಲವು ಪ್ರಶ್ನೆಗಳು.ನನ್ನ ಮಗನಿಗೆ ಈ ವರ್ಷ ಮುಂಜಿ ಮಾಡಿದ್ದೇನೆ. ಅವನನ್ನು ಕಳಿಸುತ್ತೇನೆ...ಇತ್ಯಾದಿ...ಇತ್ಯಾದಿ....

ಎಲ್ಲಾ ಪ್ರಶ್ನೆಗಳಿಗೂ ಒಂದೇ ಉತ್ತರ." ಬನ್ನಿ ಎಲ್ಲಾ ತಿಳಿಯುತ್ತೆ"

ಹೌದು, ಆಸಕ್ತರು ಬಂದರು. ವೇದಾಧ್ಯಾಯೀ ಶ್ರೀ ವಿಶ್ವನಾಥ ಶರ್ಮರು ಅವರ ಉಪನ್ಯಾಸದಲ್ಲಿ ಎಲ್ಲರ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದರು. ಉಪನ್ಯಾಸ ಕೇಳಿದ ಮೇಲೆ ಹಲವರು ಹೇಳಿದ್ದು..

1.ಮಂತ್ರ ಕಲಿಯೋಣ ಅಂತಾ ಬಂದೆ, ಜೀವನದ ಪಾಠ ಆರಂಭಿಸಿದ್ದಾರೆ. ನನಗಂತೂ ಆಶ್ಚರ್ಯವಾಗಿದೆ.

2.ವೇದಾಧ್ಯಯನ ಮಾಡುವವರು ಸತ್ಯವನ್ನೇ ಹೇಳಬೇಕು, ಅಹಿಂಸಾವಾದಿಗಳಾಗಿರಬೇಕು,.......ಯಾರೂ ವೇದಪಾಠದಲ್ಲಿ ಹೀಗೆ ಹೇಳಿಯೇ ಇರಲಿಲ್ಲ.

3. ಮನುಷ್ಯರೆಲ್ಲಾ ಒಂದೇ ಜಾತಿ! ಊಹಿಸಲೂ ಸಾಧ್ಯವಿಲ್ಲವಲ್ಲಾ!

4.ದೇವರ ಕಲ್ಪನೆಯೇ ವಿಭಿನ್ನ! ಪೂಜೆಯ ಕಲ್ಪನೆಯೇ ವಿಭಿನ್ನ! 33 ಕೋಟಿ ದೇವರು?

ವಿಶ್ವನಾಥಶರ್ಮರ ಉಪನ್ಯಾಸದ 5-10 ನಿಮಿಷಗಳ 5 ತುಣುಕುಗಳನ್ನು ಇಲ್ಲಿ ಕೇಳಿ.

ವೇದ ಪಾಠದ ಆಡಿಯೋ ಇಲ್ಲಿ ಕೇಳಿ
-ಹರಿಹರಪುರ ಶ್ರೀಧರ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ