ಹಾಸನ ಜನತೆಗೆ ವೇದಾಧ್ಯಾಯೀ ಶ್ರೀ ಸುಧಾಕರಶರ್ಮರ ಪರಿಚಯವಾಗಿ ನಾಲ್ಕೈದು ವರ್ಷವಾಯ್ತು. ಹಾಸನದ ಶ್ರೀ ಶಂಕರ ಮಠದಲ್ಲಿ ಅವರ ನಾಲ್ಕಾರು ಉಪನ್ಯಾಸಗಳು ನಡೆದಿದ್ದು ಈಗ್ಗೆ ಎರಡು ವರ್ಷಗಳ ಹಿಂದೆ 'ವೇದಸುಧೆ'ಯ ವಾರ್ಷಿಕೋತ್ಸವದಲ್ಲಿ ಅವರ ಉಪನ್ಯಾಸಗಳ ಸಿಡಿ, "ನಿಜವ ತಿಳಿಯೋಣ" ಬಿಡುಗಡೆಯಾಗಿತ್ತು. ಆ ನಂತರ ಶ್ರೀಯುತರ ಅನಾರೋಗ್ಯದಿಂದಾಗಿ ಹಾಸನಕ್ಕೆ ಅವರನ್ನು ಮತ್ತೆ ಕರೆಸಲಾಗಿರಲಿಲ್ಲ. ಹಾಸನದ ಜನತೆಗೆ ಶ್ರೀಯುತರ ಮಾತು ಕೇಳುವ ಕಾತುರತೆ ಇತ್ತು. ಅದಕ್ಕೆ ಅವಕಾಶವೂ ಒದಗಿಬಂತು. ಪ್ರವಾಸ ಮಾಡುವಷ್ಟು ಅವರ ಆರೋಗ್ಯ ಸುಧಾರಿಸದಿದ್ದರೂ ಹಾಸನದ ಜನತೆಯ ಮೇಲಿನ ಪ್ರೀತಿ ಮತ್ತು ವೇದ ಪ್ರಚಾರ ಮಾಡುವ ಅವರ ದೃಢ ನಿಲುವು ಅವರನ್ನು ಹಾಸನಕ್ಕೆ ಬರುವಂತೆ ಮಾಡಿತು. ದಿನಾಂಕ 29.09.2012 ರ ಶನಿವಾರ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಭವನದಲ್ಲಿ ಶ್ರೀಯುತರೊಡನೆ ಮಾಧ್ಯಮ-ಸಂವಾದ ನಡೆಯಿತು. ಮುಕ್ತ ಮತ್ತು ಸಹಜ ವಾತಾವರಣದಲ್ಲಿ ನಡೆದ ಸಂವಾದದ ಆಡಿಯೋ ಇಲ್ಲಿದೆ. ವಿಚಾರ ಮಾಡುವಂತಹ ಎಲ್ಲರೂ ಅತ್ಯಗತ್ಯವಾಗಿ ಕೇಳಲೇ ಬೇಕಾದ ಮಾತುಗಳು. ಎಲ್ಲವೂ 2-3 ನಿಮಿಷಗಳ ಆಡಿಯೋ ಕ್ಲಿಪ್ ಗಳು. ಕೇಳಿ ,ನಿಮ್ಮ ಅಭಿಪ್ರಾಯ ತಿಳಿಸಿ.http://www.vedasudhe.com/%e0%b2%ae%e0%b2%be%e0%b2%a7%e0%b3%8d%e0%b2%af%e0%b2%ae-%e0%b2%b8%e0%b2%82%e0%b2%b5%e0%b2%be%e0%b2%a6/
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ